ಬಲಿಯಾ: ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಅನಾಮದೇಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

'ರಾಜ್ಯದಲ್ಲಿ ಮಹಿಳೆಯರ ಭದ್ರತೆ, ಆತ್ಮಗೌರವ ಹಾಗೂ ಸಬಲೀಕರಣಕ್ಕಾಗಿ ಯೋಗಿ ಆದಿತ್ಯನಾಥ ಅವರು ಸಾಕಷ್ಟು ದುಡಿದಿದ್ದಾರೆ. ಆದರೆ ಅತ್ಯಂತ ಕಳಪೆಮಟ್ಟದ ರೀಲ್ ಮೂಲಕ ಯೋಗಿ ಅವರನ್ನು ಅವಮಾನಿಸಲಾಗಿದೆ. ಅಗ್ಗದ ಜನಪ್ರಿಯತೆಗಾಗಿ ಮಹಾತ್ಮಾ ಗಾಂಧಿ ಹಾಗೂ ನರೇಂದ್ರ ಮೋದಿ ಅವರ ಚಿತ್ರ ಬಳಸಿ, ವಿಡಿಯೊ ಎಡಿಟ್ ಮಾಡಿ ಅಪ್‌ಲೋಡ್ ಮಾಡಲಾಗಿದೆ' ಎಂದಿದ್ದಾರೆ.
ಪ್ರವೀಣ್ ಸಿಂಗ್ ಎಂಬುವವರು ನೀಡಿದ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅನಾಮದೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಜಾ ತಿಳಿಸಿದ್ದಾರೆ.
ಭೋಜಪುರಿ ಹಾಡಿಗೆ ಮಹಾತ್ಮಾ ಗಾಂಧಿ, ನರೇಂದ್ರ ಮೋದಿ ಹಾಗೂ ಯೋಗಿ ಅಧಿತ್ಯನಾಥ ಅವರು ನರ್ತಿಸುವಂತೆ ಮಾಡಿರುವ ವಿಡಿಯೊವನ್ನು ರಾಥೋಡ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಯಾವಾಗ ಎಂದು ಕೇಳಿದ್ದಾರೆ.