ಕೊಚ್ಚಿ: ಸಂವಿಧಾನ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ್ದ ಸಚಿವ ಸಾಜಿ ಚೆರಿಯನ್ ವಿರುದ್ಧದ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.
ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ವಕೀಲ ಎಂ.ಬೈಜು ನೋಯೆಲ್ ಅವರು ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಸೋಮವಾರಕ್ಕೆ ಮುಂದೂಡಿದರು.
ಜುಲೈ 3, 2022 ರಂದು ಪಥನಂತಿಟ್ಟ ಜಿಲ್ಲೆಯ ಮಲ್ಲಪಳ್ಳಿ ಎಂಬಲ್ಲಿ ಸಿಪಿಎಂ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಸಾಜಿ ಚೆರಿಯನ್ ಅವರು ಸಂವಿಧಾನದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಘಟನೆ ಸಂಬಂಧ ಕಿರ್ವೈಪುರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು 2022ರ ಡಿಸೆಂಬರ್‍ನಲ್ಲಿ ತಿರುವಲ್ಲಾ ಜುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಹೆಚ್ಚಿನ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ತನಿಖೆಯನ್ನು ಸರಿಯಾಗಿ ನಡೆಸಲಾಗಿದೆ ಎಂಬ ಅಂತಿಮ ವರದಿ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.