ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರ ವಿರುದ್ಧ ಲೋಕಪಾಲಕ್ಕೆ ದೂರು ನೀಡಿರುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ಶುಕ್ರವಾರ ತಿಳಿಸಿದ್ದಾರೆ.
ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರ ವಿರುದ್ಧ ಲೋಕಪಾಲಕ್ಕೆ ದೂರು ನೀಡಿರುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ಶುಕ್ರವಾರ ತಿಳಿಸಿದ್ದಾರೆ.
ಲೋಕಪಾಲ ಸಂಸ್ಥೆಯು ಈ ದೂರಿನ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಇ.ಡಿ ಅಥವಾ ಸಿಬಿಐಗೆ ಸೂಚಿಸಬೇಕು, ಅದಾದ ನಂತರ 'ಪೂರ್ಣ ಪ್ರಮಾಣದಲ್ಲಿ ಎಫ್‌ಐಆರ್ ದಾಖಲಿಸಿ' ತನಿಖೆ ನಡೆಸಬೇಕು ಎಂದು ಮಹುವಾ ಅವರು ಆಗ್ರಹಿಸಿದ್ದಾರೆ.
ದೂರನ್ನು ಆನ್‌ಲೈನ್ ಮೂಲಕ ಹಾಗೂ ಭೌತಿಕವಾಗಿ ನೀಡಿರುವುದಕ್ಕೆ ದಾಖಲೆಗಳನ್ನು ಮಹುವಾ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. 'ಲೋಕಪಾಲ ಸಂಸ್ಥೆಯು ಈ ದೂರಿನ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐ ಅಥವಾ ಇ.ಡಿ.ಗೆ 30 ದಿನಗಳ ಒಳಗೆ ಸೂಚನೆ ನೀಡಬೇಕು' ಎಂದು ಅವರು ಹೇಳಿದ್ದಾರೆ.
ಇಲ್ಲಿ ಭಾಗಿಯಾಗಿರುವ ಪ್ರತಿ ಸಂಸ್ಥೆಯನ್ನೂ ತನಿಖೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.