ನವದೆಹಲಿ: ಮಳೆ ಮತ್ತು ಪ್ರವಾಹದಿಂದಾಗಿ ಉಂಟಾಗಿರುವ ನಷ್ಟದ ಕುರಿತು ಅಧ್ಯಯನ ನಡೆಸಲು ಅಂತರ್ ಸಚಿವಾಲಯದ ಕೇಂದ್ರ ತಂಡ ಗುಜರಾತ್‌ಗೆ ಭೇಟಿ ನೀಡಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ನವದೆಹಲಿ: ಮಳೆ ಮತ್ತು ಪ್ರವಾಹದಿಂದಾಗಿ ಉಂಟಾಗಿರುವ ನಷ್ಟದ ಕುರಿತು ಅಧ್ಯಯನ ನಡೆಸಲು ಅಂತರ್ ಸಚಿವಾಲಯದ ಕೇಂದ್ರ ತಂಡ ಗುಜರಾತ್‌ಗೆ ಭೇಟಿ ನೀಡಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಗುಜರಾತ್‌ನ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತಂಡ ಶೀಘ್ರದಲ್ಲೇ ಭೇಟಿ ನೀಡಲಿದೆ. ಆಗಸ್ಟ್ 25ರಿಂದ 30ರವರೆಗೆ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಹಾನಿ ಕುರಿತು ಅಧ್ಯಯನ ನಡೆಸಲಿದೆ ಎಂದು ಸಚಿವಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಾದ್ಯಂತ ಸುಮಾರು 25 ಮಂದಿ ಮೃತಪಟ್ಟಿದ್ದಾರೆ.
ಮಳೆ ಮತ್ತು ಪ್ರವಾಹದಿಂದ ಗುಜರಾತ್‌ನಲ್ಲಿ ಉಂಟಾಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರ ನೇತೃತ್ವದ ಅಂತರ್ ಸಚಿವಾಲಯದ ಕೇಂದ್ರ ತಂಡವನ್ನು ಕೇಂದ್ರ ಗೃಹ ಸಚಿವಾಲಯ ಕಳುಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲೂ ಭಾರಿ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಮೇಘಸ್ಫೋಟ ಹಾಗೂ ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.