HEALTH TIPS

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಒಂಬತ್ತು ನಕ್ಸಲರ ಹತ್ಯೆ; ಮುಂದುವರಿದ ಕಾರ್ಯಾಚರಣೆ

 ದಾಂತೇವಾಡ: ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತರಾಗಿದ್ದಾರೆ.

'ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು' ಎಂದು ಬಸ್ತಾರ್ ವಲಯದ ಐಜಿ ಸುಂದರರಾಜ್ ತಿಳಿಸಿದ್ದಾರೆ.

'ಗುಂಡಿನ ಚಕಮಕಿಯು ದೀರ್ಘ ಸಮಯ ನಡೆಯಿತು. ಸಮವಸ್ತ್ರಧಾರಿ ಒಂಬತ್ತು ನಕ್ಸಲರ ಶವಗಳು ಸ್ಥಳದಲ್ಲಿ ಸಿಕ್ಕಿವೆ. ಅಲ್ಲದೆ, ಎನ್‌ಕೌಂಟರ್ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ' ಎಂದು ಅವರು ಹೇಳಿದರು.

'ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ನಕ್ಸಲ್‌ ಸಂಘಟನೆಯ ಪಶ್ಚಿಮ ಬಸ್ತಾರ್ ವಿಭಾಗದ ಘಟಕಕ್ಕೆ ಸೇರಿದ ನಕ್ಸಲರ ಚಲನವಲನದ ಕುರಿತು ಲಭಿಸಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು' ಎಂದು ಅವರು ಹೇಳಿದರು.

ಬಸ್ತಾರ್ ಪ್ರದೇಶವು ದಾಂತೇವಾಡ ಮತ್ತು ಬಿಜಾಪುರ ಸೇರಿ ಏಳು ಜಿಲ್ಲೆಗಳನ್ನು ಒಳಗೊಂಡಿದೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ಛತ್ತೀಸಗಢದಲ್ಲಿ ನಡೆಸಿದ ಎನ್‌ಕೌಂಟರ್‌ಗಳಲ್ಲಿ ಒಟ್ಟು 154 ನಕ್ಸಲರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries