HEALTH TIPS

ಗಂಭೀರ ಗಂಟಲು ಸೋಂಕು: ಸೀತಾರಾಂ ಯೆಚೂರಿಗೆ ಏಮ್ಸ್‌ನಲ್ಲಿ ಚಿಕಿತ್ಸೆ

 ವದೆಹಲಿ: ಗಂಟಲು ಸೋಂಕಿಗೆ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸಕಾರಾತ್ಮಕವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪಕ್ಷ ಶುಕ್ರವಾರ ಮಾಹಿತಿ ನೀಡಿದೆ.

'ಯೆಚೂರಿಯವರು ಏಮ್ಸ್‌ನ ತುರ್ತು ನಿಗಾ ಘಟಕದಲ್ಲಿ ಇದ್ದು, ಅವರು ಗಂಭೀರ ಗಂಟಲು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಸಿಪಿಐ(ಎಂ) ಹೇಳಿದೆ.

'ಚಿಕಿತ್ಸೆಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಕಾಮ್ರೇಡ್ ಯೆಚೂರಿಯವರ ಆರೋಗ್ಯ ಸ್ಥಿರವಾಗಿದೆ' ಎಂದು ಪಕ್ಷ ಮಾಹಿತಿ ನೀಡಿದೆ.

72 ವರ್ಷದ ಯೆಚೂರಿ, ಆಗಸ್ಟ್ 19ರಂದು ಎದೆಯಲ್ಲಿ ನ್ಯುಮೋನಿಯಾ ಮಾದರಿಯ ಸೋಂಕಿಗೆ ತುತ್ತಾಗಿ ಏಮ್ಸ್‌ಗೆ ದಾಖಲಾಗಿದ್ದರು. ಅವರ ಅನಾರೋಗ್ಯದ ನಿಖರ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries