ಸುಲ್ತಾನಪುರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.

ಬಾರ್ ಅಸೋಸಿಯೇಷನ್ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದರಿಂದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಶನಿವಾರ ಮುಂಡೂಡಲಾಗಿದೆ.
2018ರಲ್ಲಿ ಕರ್ನಾಟಕದ ಚುನಾವಣೆಯ ವೇಳೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂದಿಸಿದಂತೆ 'ಭಾರತ್ ಜೋಡೊ ನ್ಯಾಯ ಯಾತ್ರೆ'ಯ ವೇಳೆ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.
ಬಳಿಕ ಹೇಳಿಕೆ ದಾಖಲಿಸುವಂತೆ ರಾಹುಲ್ ಗಾಂಧಿ ಅವರಿಗೆ ಹಲವು ಬಾರಿ ನೋಟಿಸ್ ಜಾರಿಗೊಳಿಸಿತ್ತು. ಆದರೆ ಲೋಕಸಭೆ ಚುನಾವಣೆಯಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ನಂತರ ಜುಲೈ 26ರಂದು ರಾಹುಲ್ ಗಾಂಧಿ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದರು.