ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ನಾಡ ಹಬ್ಬ ಓಣಂ ಆಚರಣೆಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ನಿವೃತ್ತ ಮುಖ್ಯಶಿಕ್ಷಕÀ ಸತ್ಯನಾರಾಯಣ ಶರ್ಮ ಪಿ ದೀಪಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ವಿದ್ಯಾರ್ಥಿಗಳು ಹೂವಿನ ರಂಗೋಲಿ ಬಿಡಿಸಿ ಸಂಭ್ರಮಿಸಿದರು.
ಮಧ್ಯಾಹ್ನ ಓಣಂ ವಿಶೇಷ ಔತಣ ಏರ್ಪಡಿಸಲಾಗಿತ್ತು. ಬಳಿಕ ಶಾಲಾ ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಹಾಗೂ ಹೆತ್ತವರಿಗೆ ಮನರಂಜನಾ ಚಟುವಟಿಕೆ ಆಯೋಜಿಸಲಾಗಿತ್ತು.
ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಸದಸ್ಯ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮ ಚಿನಾಲ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಘಟಿಸಿದ್ದರು.