HEALTH TIPS

ಮಾದಕ ವಸ್ತು ನಿಯಂತ್ರಣಕ್ಕೆ ಕಠಿಣ ಕ್ರಮ-ಜಿಲ್ಲಾ ಅಭಿವೃದ್ಧಿ ಸಮಿತಿ ನಿರ್ದೇಶ

ಕಾಸರಗೋಡು : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ವ್ಯಪಕಗೊಳ್ಳುತ್ತಿದ್ದು, ಇದನ್ನು ತಡೆಯಲು ಕಠಿಣ ಕ್ರಮದ ಅಗತ್ಯವಿದೆ ಎಂದು ಶಾಸಕ ಎಂ. ರಾಜಗೋಪಾಲನ್  ಹೇಳಿದರು. ಜಿಲ್ಲಾಧಿಕಾರಿ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮಾದಕ ವಸ್ತು ಖರೀದಿಸಲು ಬೇರೆ ಜಿಲ್ಲೆಗಳಿಂದ ಕಾಸರಗೋಡಿಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು,  ಅವರನ್ನು ಜಿಲ್ಲೆಗೆ ತಲುಪಿಸುವ ದಂಧೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ಶಾಸಕರು ಸೂಚಿಸಿದರು.  ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆ ಬಲಪಡಿಸಬೇಕಾದ ಅಗತ್ಯವಿದೆ. ಮಾದಕ ಪದಾರ್ಥಗಳ ವಿರುದ್ಧದ ತಪಾಸಣೆಯನ್ಟು ಕಟ್ಟುನಿಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅಬಕಾರಿ ಇಲಾಖೆಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಸೇರಿದಂತೆ ವಿಸ್ತೃತ ವರದಿ ನೀಡುವಂತೆ ನಿರ್ಮಾಣ ಗುತ್ತಿಗೆ ಸಂಸ್ಥೆಗೆ ಜಿಲ್ಲಾಧಿಕಾರಿ ಸೂಚಿಸಿದರು.  ಮಲೆನಾಡು ಹೈವೇಯ ಕಾಟ್ಟಾಂ ಕವಲಯಿಲ್ ಪ್ರದೇಶದಲ್ಲಿ ರಸ್ತೆ ಮೇಲ್ದರ್ಜೆಗೇರಿಸಲು ಮೊತ್ತ ಮಂಜೂರಾಗಿದ್ದು, ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲಾಗುವುದು ಎಂದು ಕೆಆರ್‍ಎಫ್‍ಬಿ ಕಾರ್ಯಪಾಲಕ ಅಭಿಯಂತರ ತಿಳಿಸಿದರು.   ಕೆಆರ್‍ಎಫ್‍ಬಿ ಕಾರ್ಯಪಾಲಕ ಅಭಿಯಂತರ ಮಾತನಾಡಿ, ಮಲೆನಡು ಹೆದ್ದಾರಿಯ ಕಟಂ ಛೇದಕದಲ್ಲಿ ರಸ್ತೆ ಮೇಲ್ದರ್ಜೆಗೇರಿಸಲು ಹಣ ಬಂದಿದ್ದು, ರಸ್ತೆಯನ್ನು ಕಾಂಕ್ರೀಟ್ ಮಾಡಲಾಗುವುದು. ಒಂದು ಎಕರೆಗಿಂತ ಹೆಚ್ಚು ಜಮೀನು ಹೊಂದಿರದ ಭೂರಹಿತ ಪರಿಶಿಷ್ಟ ಪಂಗಡದವರ ಭೂ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಿ, ಮರುಸರ್ವೆ ನಡೆಸುತ್ತಿರುವ ಗ್ರಾಮಗಳಲ್ಲಿ ಇಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಸೂಚಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries