ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರ ರಾಜೀನಾಮೆಯನ್ನು ಅಂಗೀಕರಿಸುವ ಪ್ರಕ್ರಿಯೆಯನ್ನು ಉತ್ತರ ರೈಲ್ವೆ ಇಲಾಖೆ ಆರಂಭಿಸಿದೆ. ಈ ಮೂಲಕ ಕುಸ್ತಿಪಟುಗಳು ಹರಿಯಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಮತ್ತಷ್ಟು ಸ್ಪಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ನಿಯಮಗಳ ಪ್ರಕಾರ, ಚುನಾವಣೆಗೆ ಸ್ಪರ್ಧಿಸಲು ಸರ್ಕಾರಿ ಹುದ್ದೆಗಳಿದ್ದ ಅಭ್ಯರ್ಥಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದನ್ನು ಖಚಿತಪಡಿಸುವ ದಾಖಲೆಗಳನ್ನು ಒದಗಿಸಬೇಕು ಎಂದು ಹೇಳಿದೆ.
ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನಲೆ ಪುನಿಯಾ ಮತ್ತು ಫೋಗಟ್ ಇಬ್ಬರೂ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡದ್ದರು.
ಫೋಗಟ್ ಅವರು ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ ನಂತರ ಮೂರು ತಿಂಗಳ 'ನೋಟಿಸ್' ಅವಧಿಯನ್ನು ಪೂರೈಸುವ ನಿಬಂಧನೆಯನ್ನು ಸಡಿಲಿಸಿದ್ದು, ಇಂದು ಅಥವಾ ನಾಳೆ ರಾಜೀನಾಮೆ ಅಂಗೀಕೃತವಾಗಲಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉದ್ಯೋಗಕ್ಕೆ ರಾಜೀನಾಮೆ ನೀಡಿದರೂ ಮೂರು ತಿಂಗಳ ನೋಟಿಸ್ ಅವಧಿ ಇರುವುದರಿಂದ ಫೋಗಟ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂಬ ಊಹಾಪೋಹಗಳು ಹರಿದಾಡಿದ್ದವು.