ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಭಾಗಗಳನ್ನು ಗಂಭೀರವಾಗಿ ಗಾಯಗೊಳಿಸಿದ ಆರೋಪದಡಿ ಯೋಧನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು 30 ವರ್ಷದ ನಾಯ್ಕ್ ಎಂದು ಗುರುತಿಸಲಾಗಿದ್ದು, ಅಸ್ಸಾಂನಲ್ಲಿ ಕಾರ್ಯನಿರ್ವಹಿಸಲು ನಿಯೋಜನೆಗೊಂಡಿದ್ದರು.
ಹೋಟೆಲ್ವೊಂದರಲ್ಲಿ ನಾಯ್ಕ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತೆಯು ಚೇತರಿಸಿಕೊಳ್ಳುತ್ತಿದ್ದು, ಆಕೆಗೆ ನಾಯ್ಕ್ ಎರಡು ವರ್ಷಗಳ ಹಿಂದಿನಿಂದಲೂ ಪರಿಚಿತ ಎಂದು ತಿಳಿದು ಬಂದಿದೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.