ಕಾಸರಗೋಡು: ಎಂಪ್ಲೋಯಿಮೆಂಟ್ ಖಾತೆ ನಿರ್ದೇಶಕರಾಗಿ ಉದ್ಯೋಗದಲ್ಲಿ ಬಡ್ತಿಗೊಂಡು ವರ್ಗಾವಣೆಗೊಳ್ಳುತ್ತಿರುವ ಕಾಸರಗೋಡು ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೂಫಿಯಾನ್ ಅಹಮ್ಮದ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಸರಗೋಡಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಕಚೇರಿಯ ಸ್ಟಾಫ್ ಕೌನ್ಸಿಲ್ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾದ ಸ್ಮರಣಿಕೆಯನ್ನು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಹಾಗೂ ಜಿಪಂ ಉಪಾಧ್ಯಕ್ಷ ಶಾನವಾಜ್ ಪಾದೂರು ಹಸ್ತಾಂತರಿಸಿದರು.
ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಪಿ. ಅಖಿಲ್, ಡಿಟಿಪಿಸಿ ಕಾರ್ಯದರ್ಶಿ ಲಿಜೋ ಜೋಸೆಫ್, ಸಹಾಯಕ ಜಿಲ್ಲಾಧಿಕಾರಿ ಪಿ. ಸುರ್ಜಿತ್, ಸಹಾಯಕ ಖಜಾನೆ ಅಧಿಕಾರಿ ಒ.ಟಿ. ಗಫೂರ್, ಹುಜೂರು ಶಿರಸ್ತೇದಾರ್ ಆರ್. ರಾಜೇಶ್ ಉಪಸ್ಥಿತರಿದ್ದರು.