HEALTH TIPS

ವಂದೇ ಭಾರತ್ ಸ್ಲೀಪರ್‌ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್‌

            ಬೆಂಗಳೂರು: ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲುಗಳ ಮಾದರಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು.

          'ರೈಲುಗಳನ್ನು ಸಂಚಾರಕ್ಕಾಗಿ ಹಳಿಗೆ ಇಳಿಸುವ ಮೊದಲು 10 ದಿನಗಳು ಪರೀಕ್ಷಾರ್ಥ ಸಂಚಾರ ನಡೆಸಲಿವೆ. ಮುಂದಿನ ಮೂರು ತಿಂಗಳಲ್ಲಿ ರೈಲು ಪ್ರಯಾಣಿಕರ ಓಡಾಟಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

             'ಸಣ್ಣ ಸಣ್ಣ ವಿಷಯಗಳಿಗೂ ಹೆಚ್ಚಿನ ಒತ್ತು ನೀಡಿ ಎಚ್ಚರಿಕೆಯಿಂದ ಈ ರೈಲನ್ನು ವಿನ್ಯಾಸಗೊಳಿಸಲಾಗಿದೆ. ಲೊಕೊ ಪೈಲಟ್‌ಗಳು, ನಿರ್ವಹಣಾ ಸಿಬ್ಬಂದಿ ಅಥವಾ ಹಾಸಿಗೆ ಮತ್ತು ಆಹಾರವನ್ನು ಪೂರೈಸುವ ಸಿಬ್ಬಂದಿಯ ಅಗತ್ಯತೆಗಳನ್ನು ಪರಿಗಣಿಸಲಾಗಿದೆ. ಪ್ರತಿ ಶೌಚಾಲಯವನ್ನು ವಿಶೇಷ ಸಾಮರ್ಥ್ಯವಿರುವ ವ್ಯಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಪರೀಕ್ಷೆಯು ಮುಂದಿನ ಒಂದರಿಂದ ಎರಡು ತಿಂಗಳವರೆಗೆ ಮುಂದುವರಿಯುತ್ತದೆ' ಎಂದು ಹೇಳಿದ್ದಾರೆ.

'ವಂದೇ ಭಾರತ್‌ ರೈಲಿನ ಟಿಕೆಟ್‌ಗಳು ಕೈಗೆಟಕುವ ದರದಲ್ಲಿದ್ದು, ಮಧ್ಯಮ ವರ್ಗದ ಜನರೂ ಕೂಡ ಪ್ರಯಾಣ ಮಾಡಬಹುದಾಗಿದೆ ಈ ರೈಲಿನಲ್ಲಿ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳಿವೆ. ಈ ರೈಲನ್ನು ವಿಶ್ವದ ಅತ್ಯುತ್ತಮ ರೈಲುಗಳೊಂದಿಗೆ ಹೋಲಿಸಬಹುದು' ಎಂದು ವಿವರಿಸಿದರು.

               ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ನೂತನ ವಂದೇ ಭಾರತ್ ಉತ್ಪಾದನಾ ಘಟಕಕ್ಕೆ ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries