ತಿರುವನಂತಪುರಂ: ಕೇರಳದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು(ಸೋಮವಾರ) ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಳೆ 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ.ವರೆಗೂ ಬೀಳಲಿದೆ. ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆಯೂ(ಮಂಗಳವಾರ) ಯೆಲ್ಲೋ ಅಲರ್ಟ್ ಘೋಷಿಸÀಲಾಗಿದೆ. 23 ಮತ್ತು 24ರಂದು ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ತೆರಳದಂತೆ ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ.