ಪ್ರಸ್ತುತ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ವಾತಾವರಣ ಇದ್ದು, ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳು ಮಾರುಕಟ್ಟೆಗೆ ಹೊಸ ಫೋನ್ ಪರಿಚಯಿಸುತ್ತ ಮುನ್ನಡೆದಿವೆ. ಪ್ರಮುಖವಾಗಿ ಬಜೆಟ್ ವಿಭಾಗದಲ್ಲಿ (15,000ರೂ. ರೇಂಜ್‌ನಲ್ಲಿ) ಪೈಪೋಟಿ ಜೋರಾಗಿದ್ದು, ಬಜೆಟ್ ಬೆಲೆಗೆ ಅತ್ಯುತ್ತಮ ಫೀಚರ್ಸ್ ಮೂಲಕ ಅಧಿಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.
ಹೌದು, ಬಜೆಟ್ ದರದಲ್ಲಿ ಇತ್ತೀಚಿಗೆ ಕೆಲವು ಹೊಸ 5G ಫೋನ್‌ಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಹೊಸದಾಗಿ ಎಂಟ್ರಿ ಕೊಟ್ಟಿರುವ ಫೋನ್‌ಗಳ ಪೈಕಿ CMF, ಮೊಟೊ (Moto), ವಿವೋ (Vivo) ಹಾಗೂ ಪೊಕೊ (POCO) ಕಂಪನಿಗಳ ಫೋನ್‌ಗಳು ಸಹ ಸೇರಿವೆ. ಸದ್ಯ ನೀವೇನಾದರೂ ಸುಮಾರು 15000ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಹೊಸ ಫೋನ್ ಖರೀದಿಸುವ ಯೋಜನೆ ಇದ್ರೆ, ಈ ಲೇಖನ ನಿಮಗೆ ಉಪಯುಕ್ತ ಎನಿಸುತ್ತದೆ. ಹೊಸ ಫೋನ್‌ಗಳ ಮಾಹಿತಿ ತಿಳಿಯಲು ಮುಂದೆ ಓದಿರಿ.
CMF Phone 1 ಫೋನ್
CMF Phone 1 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2000nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದರೊಂದಿಗೆ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ವಿವೋ T3x 5G ಮೊಬೈಲ್
ವಿವೋ ಕಂಪನಿಯ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಖರೀದಿಗೆ ಇದೆ.
ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ.
ಮೊಟೊ G64 5G ಫೋನ್
ಮೊಟೊ G64 5G ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಅನ್ನು ಡಿಸ್‌ಪ್ಲೇ ಹೊಂದಿದ್ದು, ಈ ಫೋನಿನ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.
ಇದರ ಜೊತೆಗೆ ಈ ಫೋನ್ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಹೊಂದಿದೆ.