ತಿರುವನಂತಪುರಂ: ರಾಜ್ಯದಲ್ಲಿ ಎಂಪಾಕ್ಸ್ ತಡೆಗಟ್ಟುವಿಕೆ ಮತ್ತು ಪರಿಣಾಮಕಾರಿ ಚಿಕಿತ್ಸೆಗಾಗಿ ನವೀಕರಿಸಿದ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಘೋಷಿಸಿದ್ದಾರೆ.
ಪ್ರಕರಣಗಳು ಹೆಚ್ಚಾದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಐಸೋಲೇಶನ್ ಸೌಲಭ್ಯವನ್ನು ಸ್ಥಾಪಿಸಲಾಗಿದೆ. ವಿಮಾನ ನಿಲ್ದಾಣಗಳು ಸೇರಿದಂತೆ ನಿಗಾವನ್ನು ಬಲಪಡಿಸಲಾಗಿದೆ. ಪ್ರಸ್ತುತ 5 ಲ್ಯಾಬ್‍ಗಳಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಪ್ರಯೋಗಾಲಯಗಳಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಒದಗಿಸಲಾಗುವುದು. ಬೇರೆ ದೇಶಗಳಿಂದ ಇಲ್ಲಿಗೆ ಬರುವವರು ರೋಗ ಲಕ್ಷಣ ಕಂಡು ಬಂದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಚಿಕಿತ್ಸೆ ಪಡೆಯಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಗುಳ್ಳೆ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿರುವರು.