ತಿರುವನಂತಪುರಂ: ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ 35 ರಿಂದ 45 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ತೀರಗಳಲ್ಲಿ ಮೀನುಗಾರಿಕೆಯನ್ನು ಸಹ ನಿಷೇಧಿಸಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.