ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ವಿವಿಧ ಜೀರ್ಣೋದ್ಧಾರ ಕಾರ್ಯಗಳಿಗಾಗಿ ನಿಧಿ ಸಂಚಯನ ಕಾರ್ಯಕ್ರಮ ನಿನ್ನೆ (ಸೆ. 7) ಬೆಳಗ್ಗೆ 10ಕ್ಕೆ ದೇವಸ್ಥಾನ ಸಭಾಂಗಣದಲ್ಲಿ ಜರಗಿತು.
ದೇವಸ್ಥಾನ ತಂತ್ರಿವರ್ಯ ಬ್ರಹ್ಮಶ್ರೀ ಗಣೇಶ ತಂತ್ರಿ ದಏಲಂಪಾಡಿ ಅವರ ಮಾರ್ಗದರ್ಶನದಲ್ಲಿ ನಡೆದ ಸಮಾರಂಭದಲ್ಲಿ ಮುಂಡಪ್ಪಳ್ಳ ಶ್ರೀರಾಜರಾಜೇಶ್ವರಿ ಕ್ಷೇತ್ರದ ಧರ್ಮದರ್ಶಿ ಕೆ.ಕೆ.ಶೆಟ್ಟಿ ಅವರು ಮಂಗಳೂರಿನ ಕೈಗಾರಿಕೋದ್ಯಮಿ ಮಧುಸೂದನ ಅಯರ್ ಅವರಿಗೆ ನಿಧಿ ಸಂಚಯನ ಕೂಪನ್ ಹಸ್ತಾಂತರಿಸಿ ಬಿಡುಗಡೆಗೊಳಿಸಿದರು.ಶ್ರೀಕ್ಷೇತ್ರದ ಜೀಣೋದ್ದಾರ ಸಮಿತಿ ಅಧ್ಯಕ್ಷ, ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಕುಶಾಲಪ್ಪ, ಜೀಣೋದ್ದಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.