ಬದಿಯಡ್ಕ: ವಿಕಾಸ ಟ್ರಸ್ಟ್ ನಡೆಸುವ "ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ" 2ನೇ ಹಂತದ ಉದ್ಘಾಟನಾ ಸಮಾರಂಭ ಸೆ.28ರಂದು ಸಂಜೆ 4ಕ್ಕೆ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಉನ್ನತ ಪ್ರೌಢ ಶಾಲೆ ಸಭಾಂಗಣದಲ್ಲಿ ನಡೆಯಲಿದೆ.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಶೀರ್ವಚನ ನೀಡುವರು. ಕಾಸರಗೋಡು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶಿಲ್ಪಾ ದ್ಯಾವಯ್ಯ ಐಪಿಎಸ್, ಬೇಳ ಶೋಕಮಾತಾ ಇಗರ್ಜಿ ಧರ್ಮಗುರು ಸ್ಟೇನಿ ಪಿರೇರಾ, ಪದ್ಮಶ್ರೀ ಸತ್ಯನಾರಾಯಣ ಬೆಳೇರಿ ಅತಿಥಿಗಳಾಗಿ ಭಾಗವಹಿಸುವರು. ನೀರ್ಚಾಲು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಳ್ಳುವರು ಎಂದು ವಿಕಾಸ ಟ್ರಸ್ಟ್ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.