HEALTH TIPS

ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಸಾಕ್ಷ್ಯಗಳನ್ನು ತಿರುಚಲಾಗಿದೆ: ವೈದ್ಯರ ಆರೋಪ

 ವದೆಹಲಿ: ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ- ಕೊಲೆ ಪ್ರಕರಣದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಹಿರಿಯ ವೈದ್ಯರು ಸೋಮವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ವೈದ್ಯರು, ತಮ್ಮ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಮಾತುಕತೆಯನ್ನು ನೇರ ಪ್ರಸಾರ ಮಾಡಬೇಕೆಂಬ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

'ನಾವು ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣವನ್ನು ಘೋರ ಅಪರಾಧವೆಂದು ಖಂಡಿಸುತ್ತೇವೆ. ಈ ಪ್ರಕರಣದಿಂದ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ನಡುವಿನ ಸಂಬಂಧ ಹದಗೆಡುವಂತಾಗಿದೆ' ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

ಅತ್ಯಾಚಾರ- ಕೊಲೆ ಪ್ರಕರಣ ಸಂಬಂಧ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಿರಿಯ ವೈದ್ಯರು ಆರೋಗ್ಯ ಇಲಾಖೆಯ ಕೇಂದ್ರ ಕಚೇರಿ ಸ್ವಾಸ್ಥ್ಯ ಭವನದ ಎದುರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ತಮ್ಮ ನಿವಾಸದಲ್ಲಿ ಮಾತುಕತೆಗೆ ಆಗಮಿಸುವಂತೆ ಕಿರಿಯ ವೈದ್ಯರ ನಿಯೋಗಕ್ಕೆ ಸಿಎಂ ಮಮತಾ ಬ್ಯಾನರ್ಜಿ ಆಹ್ವಾನ ನೀಡಿದ್ದು, ಪ್ರತಿಭಟನಾಕಾರರು ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries