HEALTH TIPS

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‍ನಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

             ಕಾಸರಗೋಡು: ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಸರಗೋಡು ವಲಯದ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಾಸರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.  

             ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆ  ಅಧ್ಯಕ್ಷ ಅಖಿಲೇಶ್ ನಗುಮುಗಂ ಸಮಾರಂಭ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಜನ್ ಮುಳಿಯಾರ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಪಿ ಟಿ ಎ ಅಧ್ಯಕ್ಷ ಅಬೂಬಕರ್ ಸಿದ್ಧಿಕ್,  ಕಾರ್ಯದರ್ಶಿ ಉದಯ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾಸರಗೋಡು ವಲಯ ಅಧ್ಯಕ್ಷ ಜ್ಞಾನೇಶ್ ಆಚಾರ್ಯ, ಕುತ್ಯಾಳ ನವಜೀವನ ಸಮಿತಿ ಅಧ್ಯಕ್ಷ ಉದಯಕುಮಾರ್, ಗೌರವಾಧ್ಯಕ್ಷ ಪದ್ಮನಾಭ ಆಚಾರ್ಯ, ಕಾಸರಗೋಡು ವಲಯದ ಮೇಲ್ವಿಚಾರಕಿ ಶ್ರೀಮತಿ, ಶಾಲೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries