ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು 2025ರ ಫೆಬ್ರವರಿ 2ರಿಂದ 10ರ ತನಕ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿಷೇಕ ಸಮಿತಿ ಸದಸ್ಯರು ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ, ಸೇವಾ ಸಮಿತಿ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಬ್ರಹ್ಮಕಲಶಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ಟರ್ ನಾರಂಪಾಡಿ, ಕೋಶಾಧಿಕಾರಿ ಸೀತಾರಾಮ ಕುಂಜತ್ತಾಯ, ಉಪಾಧ್ಯಕ್ಷ ಕುಞÂರಾಮ ಗೋಸಾಡ, ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ದೇವರಾಜ್ ಭಂಡಾರಿ, ಅಖಿಲೇಶ್ ನಗುಮುಖಂ, ಪ್ರಮೋದ್ ಮೊದಲಾದವರು ಪಾಲ್ಗೊಂಡಿದ್ದರು.