ಕೋಝಿಕ್ಕೋಡ್: ವಯನಾಡ್ ದುರಂತ ಸಂತ್ರಸ್ತರಿಗೆ ಪರಿಹಾರವಾಗಿ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಾಲಮನ್ನಾ ಘೋಷಿಸಿದೆ. ವಯನಾಡ್ ದುರಂತ ಸಂತ್ರಸ್ತರ ಸಾಲವನ್ನು ಮನ್ನಾ ಮಾಡಲು ರಾಜ್ಯ ಸಹಕಾರಿ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ಧರಿಸಿದೆ.
ಬ್ಯಾಂಕ್ 52 ಜನರ 64 ಸಾಲ ಮನ್ನಾ ಮಾಡಿದೆ. ಒಟ್ಟಾರೆ ಒಂದು ಕೋಟಿ ಐದು ಲಕ್ಷ ರೂಪಾಯಿಗೂ ಅಧಿಕ ಸಾಲ ಮನ್ನಾ ಆಗಲಿದೆ ಎಂದು ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದರು. ಒಂದು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಮೇಲಾಧಾರವಾಗಿ ನೀಡಿದ ದಾಖಲೆಗಳನ್ನು ಹಿಂತಿರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ವಿಪತ್ತು ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದೆ.