ಮುಂಬೈ: ಮಾಜಿ ಸೈನಿಕರ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರಕ್ಕೆ 650ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇತ್ತ ದೇಶದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಾಂಗ್ಲಾ ಆತಿಥ್ಯದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಸ್ಥಳಾಂತರಗೊಂಡಿದ್ದು, ಅಲ್ಲಿನ ಕ್ರಿಕೆಟ್ ಮಂಡಳಿ ಕೂಡ ಪರಿಸ್ಥಿತಿ ಸುಧಾರಿಸುವವರೆಗೂ ಆತಿಥ್ಯ ವಹಿಸಬಾರದೆಂಬ ನಿರ್ಧಾರಕ್ಕೆ ಬಂದಿದೆ.
ಇತ್ತ ಪುರುಷರ ತಂಡವು ಸದ್ಯ ಭಾರತ ಪ್ರವಾಸದಲ್ಲಿದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲು ಭಾರತಕ್ಕೆ ಬಂದಿಳಿದಿದೆ. ಈಗಾಗಲೇ ಸರಣಿಯ ಮೊದಲ ಪಂದ್ಯ ಇಂದು (ಸೆಪ್ಟೆಂಬರ್ 19) ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದ್ದು, ಪ್ರವಾಸಿ ತಂಡಕ್ಕೆ ಆತಿಥೇಯರು ಶಾಕ್ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಭಾರತ ಮಾತ್ರ ಬಾಂಗ್ಲಾದೇಶದ ವಿರುದ್ಧ ಸರಣಿ ಆಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಕೂಡಲೇ ಆಟವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆರ್ಎಸ್ಎಸ್ನ ಹಿರಿಯ ವಿಚಾರವಾದಿ ರತನ್ ಶಾರದಾ, ಶೇಖ್ ಹಸೀನಾ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಆ ದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿರುವಾಗಲೇ ಬಾಂಗ್ಲಾದೇಶದೊಂದಿಗೆ ಭಾರತ ಕ್ರಿಕೆಟ್ ಆಡುತ್ತಿರುವುದು ಅಮಾನವೀಯ ಮತ್ತು ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಕಿಡಿಕಾರಿದ್ದಾರೆ.
2021ರಲ್ಲಿ ಭಾರತ ತಂಡವು ಟಿ20 ಟೂರ್ನಿಯಲ್ಲಿ ಭಾಗಿಯಾಗುವಾಗ ಕ್ ಲೈವ್ಸ್ ಮ್ಯಾಟರ್ ಅಭಿಯಾನವನ್ನು ಬೆಂಬಲಿತ್ತು. ಮಹಿಳೆಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಅಫ್ಘಾನಿಸ್ತಾನದೊಂದಿಗೆ ಆಡಲು ನಿರಾಕರಿಸಿತು. ಅದೇ ರೀತಿ ವರ್ಣಭೇದ ನೀತಿಯ ಕಾರಣದಿಂದಾಗಿ ದಕ್ಷಿಣ ಆಫ್ರಿಕಾವನ್ನು 21 ವರ್ಷಗಳ ಕಾಲ ಬಹಿಷ್ಕರಿಸಲಾಯಿತು. ಅದೇ ರೀತಿ ಸೆಪ್ಟೆಂಬರ್ 27ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸುವುದು ಸೂಕ್ತ.
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೆಟ್ಟದಾಗಿ ನಡೆಸಿಕೊಂಡರೂ ಪಂದ್ಯಗಳನ್ನು ಮುಂದುವರಿಸುವ ಬಿಸಿಸಿಐ ನಿರ್ಧಾರದ ಬಗ್ಗೆ ಸಂಘ ಪರಿವಾರದೊಳಗೆ ಭಾರೀ ಅಸಮಾಧಾನವಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಈ ಕೂಡಲೇ ತಮ್ ನಿಲುವನ್ನು ತಿಳಿಸಬೇಕೆಂದು ಆರ್ಎಸ್ಎಸ್ನ ಹಿರಿಯ ವಿಚಾರವಾದಿ ರತನ್ ಶಾರದಾ ಆಗ್ರಹಿಸಿದ್ದಾರೆ.