HEALTH TIPS

ಜಮ್ಮು: ಕಥುವಾದಲ್ಲಿ ಉಗ್ರನ ಹತ್ಯೆ, ರಜೌರಿಯಲ್ಲಿ ಎನ್‌ಕೌಂಟರ್

 ಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಭಾನುವಾರ ಮಧ್ಯಾಹ್ನ ಬಿಲ್ಲವರ ತಹಸಿಲ್‌ನ ಕೋಗ್-ಮಂಡಲಿಯಲ್ಲಿ
ಪೊಲೀಸರು ಜೈಷೆ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಉಗ್ರನನ್ನು ಎನ್‌ಕೌಂಟರ್ ಮಾಡಿದ್ದು, ಮೃತದೇಹವನ್ನು ವಶಪಡಿಸಿ ಕೊಳ್ಳಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಮೂರ್ನಾಲ್ಕು ವಿದೇಶಿ ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತ ಕಾರಣ ಗ್ರಾಮದಲ್ಲಿ ಶನಿವಾರ ಕಾರ್ಯಚರಣೆ ಆರಂಭಿಸಲಾಗಿತ್ತು. ಜಂಟಿ ಭದ್ರತಾ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದ್ದ ಪರಿಣಾಮ ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ' ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಹೇಳಿದರು.

'ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಲಭ್ಯವಾಗಿದ್ದು, ಶೀಘ್ರವೇ ಅವರನ್ನು ಪತ್ತೆಹಚ್ಚುವ ಸಲುವಾಗಿ ಕಾರ್ಯಾಚರಣೆ ನಡೆಸು ತ್ತಿದ್ದೇವೆ' ಎಂದು ಜೈನ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಜೌರಿಯಲ್ಲೂ ಎನ್‌ಕೌಂಟರ್‌: ರಜೌರಿ ಜಿಲ್ಲೆಯ ಥನಮಂಡಿ ಪ್ರದೇಶದಲ್ಲಿಯೂ ಭಾನುವಾರ ಸಂಜೆ ಭದ್ರತಾ ಸಿಬ್ಬಂದಿ ಎನ್‌ಕೌಂಟರ್‌ ನಡೆಸಿದ್ದಾರೆ.ಎನ್‌ಕೌಂಟರ್‌ನಲ್ಲಿ ಎಷ್ಟು ಉಗ್ರರು ಹತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries