ಜೇರುಸಲೇಂ: ಶನಿವಾರ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ ಮತ್ತೊಬ್ಬ ಮುಖಂಡ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಸೇನಾಧಿಕಾರಿಗಳು ಹೇಳಿದ್ದಾರೆ.
ಜೇರುಸಲೇಂ: ಶನಿವಾರ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ ಮತ್ತೊಬ್ಬ ಮುಖಂಡ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಸೇನಾಧಿಕಾರಿಗಳು ಹೇಳಿದ್ದಾರೆ.
ದಾಳಿಯಲ್ಲಿ ಹಿಜ್ಬುಲ್ಲಾ ಕೇಂದ್ರ ಸಮಿತಿಯ ಉಪ ಮುಖ್ಯಸ್ಥ ನಭಿ ಕಾವುಕ್ ಎನ್ನುವರು ಮೃತಪಟ್ಟಿದ್ದಾರೆ.
ನಸ್ರಲ್ಲಾ ನಿಧನದ ಬಳಿಕ ನಭಿ ಕಾವುಕ್ ಹಿಜ್ಬುಲ್ಲಾ ಸಂಘಟನೆಯನ್ನು ಮುನ್ನಡೆಸುವುದಾಗಿ ಹೇಳಿಕೊಂಡಿದ್ದ. ಆದರೆ, ಹೋರಾಟ ಅಣಿಗೊಳಿಸುವ ಮುನ್ನವೇ ಆತ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಸೇನಾಧಿಕಾರಿಗಳು ಸುದ್ದಿಸಂಸ್ಥೆ ಎಪಿಗೆ ತಿಳಿಸಿದ್ದಾರೆ.
ಹಿಜ್ಬುಲ್ಲಾ ಸಂಘಟನೆಯ ಹಲವು ನಾಯಕರು ಲೆಬನಾನ್‌ನ ದಕ್ಷಿಣ ಬೈರೂತ್‌ನ ದಾಹಿಯಾ ಪ್ರದೇಶದಲ್ಲಿ ಶುಕ್ರವಾರ (ಸೆಪ್ಟೆಂಬರ್ 17ರಂದು) ಸಭೆ ಸೇರಿದ್ದರು. ಈ ಸಭೆಯಲ್ಲಿ ನಸ್ರಲ್ಲಾ ಭಾಗವಹಿಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇಸ್ರೇಲ್ ಸೇನೆ, ವಾಯುದಾಳಿ ನಡೆಸಿತ್ತು. ನಸ್ರಲ್ಲಾ ಮಾತ್ರವಲ್ಲದೆ, ಸಂಘಟನೆಯ ಕಮಾಂಡರ್ ಅಲಿ ಕರ್ಕಿ ಸಹ ಮೃತಪಟ್ಟಿದ್ದರು.