ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ಕಾಲೇಜಿನ ವೈದ್ಯ ವಿದ್ಯಾರ್ಥಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಮಂಗಳವಾರ ಸಂಜೆ 5 ಗಂಟೆಯ ಒಳಗಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಘಟನೆ ಬಗ್ಗೆ ರಾಜ್ಯ ಸರ್ಕಾರ ಹಾಗೂ ಸಿಬಿಐ ಸಲ್ಲಿಸಿದ ಸ್ಥಿತಿಗತಿ ವರದಿಯನ್ನು ಪರಿಶೀಲನೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠ, ಈ ಕುರಿತ ತನಿಖೆಗೆ ಮಾರ್ಗದರ್ಶನ ನೀಡಲಿದ್ದೇವೆ ಎಂದು ಹೇಳಿತು. ಅಲ್ಲದೆ ಆಸ್ಪತ್ರೆಯಲ್ಲಿ ನಿಯೋಜಿಸಲಾದ ಸಿಐಎಸ್‌ಎಫ್‌ನ ಮಹಿಳಾ ಸಿಬ್ಬಂದಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
ಕಿರಿಯ ವೈದ್ಯರ ಮುಷ್ಕರಿಂದ 23 ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಪೀಠದ ಗಮನಕ್ಕೆ ತಂದರು.
ಮಂಗಳವಾರ ಸಂಜೆ 5 ಗಂಟೆಯ ಒಳಗಾಗಿ ಕಿರಿಯ ವೈದ್ಯರು ಕೆಲಸಕ್ಕೆ ಹಾಜರಾಗಬೇಕು ಎಂದು ನಾವು ನಿರ್ದೇಶಿಸುತ್ತಿದ್ದೇವೆ. ಅಲ್ಲಿಯವರೆಗೂ ಅವರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ವೈದ್ಯರು ಕೆಲಸಕ್ಕೆ ಹಾಜರಾಗದಿದ್ದರೆ, ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದರಿಂದ ರಾಜ್ಯ ಸರ್ಕಾರವನ್ನು ನಾವು ತಡೆಯುವುದಿಲ್ಲ. ಒಂದು ವೇಳೆ ಹಾಜರಾದರೆ ಯಾವ ಕ್ರಮ ತೆಗೆದುಕೊಳ್ಳುವಂತಿಲ್ಲ' ಎಂದು ಕೋರ್ಟ್ ಹೇಳಿದೆ.
ಅಲ್ಲದೆ ರಕ್ಷಣೆ ಹಾಗೂ ಭದ್ರತೆಗೆ ಬಗ್ಗೆ ವೈದ್ಯರಿಗೆ ಧೈರ್ಯ ತುಂಬಲು ಪಶ್ಚಿಮ ಬಂಗಾಳ ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.