ತಿರುವನಂತಪುರಂ: ರಾಜ್ಯದಲ್ಲಿ ಮತ್ತೋರ್ವನಿಗೆÉ ಎಂ-ಪಾಕ್ಸ್ ಕಾಯಿಲೆ ಇರುವುದು ದೃಢಪಟ್ಟಿದೆ. ಎರ್ನಾಕುಳಂನ ಯುವಕನಿಗೆ ರೋಗ ಇರುವುದು ಪತ್ತೆಯಾಗಿದೆ.
ಯುವಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಯುವಕ ನಿನ್ನೆಯಷ್ಟೇ ವಿದೇಶದಿಂದ ಕೇರಳಕ್ಕೆ ಬಂದಿದ್ದ. ರೋಗಲಕ್ಷಣಗಳು ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಲಪ್ಪುರಂನ ಯುವಕನಿಗೂ ರೋಗ ಇರುವುದು ಪತ್ತೆಯಾಗಿತ್ತು. ಅವರಿಗೆ ಜ್ವರ ಮತ್ತು ದೇಹದಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದವು.
ಇದೇ ವೇಳೆ ಜನರು ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಸೋಂಕಿತರೊಂದಿಗೆ ನೇರ ಸಂಪರ್ಕವನ್ನು ತಪ್ಪಿಸಬೇಕು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.