ಕಾಸರಗೋಡು: 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ 'ಡಾ .ಟಿ. ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ' ಪ್ರಶಸ್ತಿಗೆ ಕಾಸರಗೋಡಿನ ಹಿರಿಯ ಸಂಶೋಧಕ ಡಾ . ಪಿ. ಶ್ರೀ ಕೃಷ್ಣಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಮೇರು ವಿದ್ವಾಂಸರಾದ ಡಾ .ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರ ಬಂಧು-ಮಿತ್ರರು ಈ ದತ್ತಿಯನ್ನು ಸ್ಥಾಪಿಸಿದ್ದು ಹಳಗನ್ನಡ ಸಾ ಹಿತ್ಯ , ಛಂದಸ್ಸು , ನಿಘಂಟು ರಚನೆ, ಗ್ರಂಥಸಂಪಾದನೆ, ಅನುವಾದ, ಭಾಷಾ ಶಾಸ್ತ್ರ ಮುಂತಾದ ಶಾಸ್ತ್ರ ಸಾಹಿತ್ಯ ಕ್ಷೇತ್ರ ದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರ ನೀಡಲಾಗುತ್ತದೆ.
ಕಾಸರಗೋಡಿನ ಪುತ್ರೋಡಿ ಎಂಬ ಗ್ರಾಮದಲ್ಲಿ ಜನಿಸಿದ ಡಾ . ಪಿ. ಶ್ರೀ ಕೃಷ್ಣಭಟ್ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿ ಮತ್ತು ಚಿನ್ನದ ಪದಕದೊಂದಿಗೆ ಕನ್ನಡದಲ್ಲಿ ಸ್ನಾತಕೋ ತ್ತರ ಪದವಿ ಪಡೆದು 'ಕನ್ನಡ ವ್ಯಾಕರಣ ಪರಂಪರೆಯ ಮೇಲೆ ಸಂಸ್ಕøತದ ಪ್ರಭಾವ'ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದಿದ್ದಾರೆ. ಸು ರತ್ಕಲ್ಲಿನಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿ ಮುಂದೆ ಕಾಸರಗೋಡಿನ ಕನ್ನಡ ಸ್ನಾ ತಕೋ ತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಕನ್ನಡ ಪ್ರಾ ಧ್ಯಾಪಕರಾಗಿ, ವಿಭಾ ಗದ ಮುಖ್ಯಸ್ಥರಾಗಿಸ ಸೇವೆ ಸಲ್ಲಿಸಿದ್ದಾರೆ. ನಂತರ ಕಣ್ಣೂರು ವಿಶ್ವವಿದ್ಯಾನಿಲಯದ ಭಾರತೀಯ ಭಾಷಾ ಅಧ್ಯಯನಾಂಗದಲ್ಲಿ ಸ್ಥಾಪಕ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಗಡಿ ಭಾ ಗದ ಕಾಸರಗೋಡು ಸರ್ಕಾರಿ ಕಾಲೇಜು ಮತ್ತು ಕಲ್ಲಿಕೋಟೆ, ಕಣ್ಣೂರು ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸಂಶೋಧನೆ ಮತ್ತು ಅಧ್ಯಯನ ವಭಾಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗಡಿನಾಡಿನಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.