ಎರ್ನಾಕುಳಂ: ಕೇರಳದ ಹಿರಿಯ ಕನ್ನಡಪರ ಸಂಸ್ಥೆಯಾದ ಕೊಚ್ಚಿನ್ ಕನ್ನಡ ಸಂಘದ ಹಿರಿಯ ಉಪಾಧ್ಯಕ್ಷರಾಗಿ ವೈದ್ಯ, ಶ್ರೇಷ್ಠ ಹೊರನಾಡ ಕನ್ನಡಿಗ ಪ್ರಶಸ್ತಿ ಪುರಸ್ಕøತ ಡಾ ಮಲ್ಲಿಕಾರ್ಜುನ ಎಸ್ ನಾಸಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೂಲತಃ ಕಲಬುರ್ಗಿ ಜಿಲ್ಲೆಯವರಾದ ನಾಸಿ ಅವರು ಇಲ್ಲಿನ ಎಸ್ ಬಿ ಆರ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಎಂ ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂ ಬಿ ಬಿ ಎಸ್ ಪೂರೈಸಿ 2004ರಲ್ಲಿ ಕೇರಳದ ಕೊಚ್ಚಿನ್‍ಗೆ ಅಗಮಿಸಿ 2016ರಲ್ಲಿ ಪೆÇೀತನ್‍ಕ್ಕಾಡ್ ಎಂಬಲ್ಲಿ ಆಸ್ಪತ್ರೆಯೊಂದನ್ನು ತೆರೆದು ಇಲ್ಲಿ ವೈದ್ಯ ವೃತ್ತಿ ಆರಂಭಿಸಿದ್ದರು.
ಈ ಪ್ರದೇಶದಲ್ಲಿರುವ ಕನ್ನಡ ಭಾಷಿಗರನ್ನುಒಗ್ಗೂಡಿಸಿ ಅವರಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಕಲೆಗಳನ್ನು ಬೆಳೆಸಲು ನಿರಂತರ ಪೆÇ್ರೀತ್ಸಾಹ ನೀಡುತ್ತಾ ಬಂದಿದ್ದಾರೆ, ಕನ್ನಡ ಮತ್ತು ಮಲೆಯಾಲ ಭಾಷಾ ಸೌಹಾರ್ದತೆಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ
ಇವರ ಕನ್ನಡಪರ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು 2022ರ ಜುಲೈ ತಿಂಗಳಲ್ಲಿ ಮುಂಬೈನಲ್ಲಿ ನಡೆದ ಹೊರನಾಡ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಶ್ರೇಷ್ಠ ಹೊರನಾಡ ಕನ್ನಡಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.