ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ ಕಲ್ಲೂರು ಅವರ'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಕಥಾಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘವು(ರಿ.) ಜ್ಞಾನಪೀಠ ಪುರಸ್ಕøತ ಸಾಹಿತಿ ಪ್ರೊ. ಯು. ಆರ್ ಅನಂತಮೂರ್ತಿಅವರ ಹೆಸರಲ್ಲಿ ನೀಡುವ 2023ನೇ ಸಾಲಿನ ಪ್ರತಿಷ್ಠಿತ ಅನಂತಮೂರ್ತಿ ಸಣ್ಣಕಥಾ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 10,000 ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು ಸೆಪ್ಟಂಬರ್ 22ರಂದು ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತುಪ್ರಶಸ್ತಿ ಪುರಸ್ಕøತರೊಂದಿಗೆ ಸಂವಾದ ನಡೆಯಲಿದೆ ಎಂದು ಶಿವಮೊಗ್ಗದ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಂದರರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ