HEALTH TIPS

ಹರಿಯಾಣ ಬಿಜೆಪಿ ಘಟಕದ ಉಪಾಧ್ಯಕ್ಷೆ ಸಂತೋಷ್ ಯಾದವ್ ರಾಜೀನಾಮೆ

                 ನಾರ್ನೌಲ್ : ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ           ಹರಿಯಾಣ ಬಿಜೆಪಿ ಘಟಕದ ಉಪಾಧ್ಯಕ್ಷರಾದ ಸಂತೋಷ್ ಯಾದವ್, ಪಕ್ಷ ತೊರೆದಿದ್ದಾರೆ. ಮೂಲ ಬಿಜೆಪಿಗರನ್ನು ಪಕ್ಷ ಕಡೆಗಣಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

                 ವಿಧಾನಸಭೆಯ ಮಾಜಿ ಉಪಾಧ್ಯಕ್ಷೆಯೂ ಆಗಿರುವ ಯಾದವ್, ಅತೇಲಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.

             ಈ ಕ್ಷೇತ್ರದಿಂದ ಕೇಂದ್ರ ಸಚಿವ ರಾವ್ ಇಂದ್ರಜಿತ್ ಸಿಂಗ್ ಅವರ ಪುತ್ರಿ ಆರತಿ ಸಿಂಗ್ ರಾವ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

                     ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದೆ ಪಕ್ಷದ ತೊರೆದ ಬಿಜೆಪಿಯ ಮೂರನೇ ನಾಯಕಿಯಾಗಿದ್ದಾರೆ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹರಿಯಾಣ ಸಚಿವ ರಂಜಿತ್ ಸಿಂಗ್ ಚೌಟಾಲ ಮತ್ತು ಶಾಸಕ ಲಕ್ಷ್ಮಣ್ ದಾಸ ನಪಾ ಪಕ್ಷ ತೊರೆದಿದ್ದರು.

             ಪ್ರಾಥಮಿಕ ಸದಸ್ಯತ್ವ ಸೇರಿ ಪಕ್ಷದ ಎಲ್ಲ ಹುದ್ದೆಗಳಿಗೂ ರಾಜೀನಾಮೆ ನೀಡುತ್ತಿರುವುದಾಗಿ ರಾಜ್ಯ ಘಟಕದ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಯಾದವ್ ತಿಳಿಸಿದ್ದಾರೆ.

               'ಭಾರತೀಯ ಜನತಾ ಪಕ್ಷಕ್ಕೆ ನನ್ನ ಸಮರ್ಪಣೆ ಯಾವಾಗಲೂ ಅಚಲವಾಗಿತ್ತು. ನಾನು ಸದಾ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಅನುಸರಿಸಿ ಕೆಲಸ ಮಾಡಿದ್ದೇನೆ. ಆದರೆ, ಪಕ್ಷದೊಳಗೆ, ವಿಶೇಷವಾಗಿ ಕಾರ್ಯಕರ್ತರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾನು ಬಹಳ ದುಃಖದಿಂದ ಹೇಳಬೇಕಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ನಿಷ್ಠೆಯಿಂದ ಕೆಲಸ ಮಾಡಿದ್ದೆ'ಎಂದು ತಿಳಿಸಿದ್ದಾರೆ.

                  ಪಕ್ಷಕ್ಕಾಗಿ ಅಥವಾ ತಮ್ಮ ವಿಧಾನಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂದೂ ದೂರಿದ್ದಾರೆ. ಈ ಪರಿಸ್ಥಿತಿ ಅತ್ಯಂತ ದುರದೃಷ್ಟಕರ. ಇದು ಪಕ್ಷದ ಕಾರ್ಯಕರ್ತರಲ್ಲಿ ನಿರಾಶೆ ಮತ್ತು ಅಸಮಾಧಾನವನ್ನು ಹರಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries