ಕಾಸರಗೋಡು: ಕಾಂಗ್ರೆಸ್‍ನ ಹಿರಿಯ ಮುಖಂಡ, ಉದುಮದ ಮಾಜಿ ಶಾಸಕ ಪಯ್ಯನ್ನೂರು ಕೈದಪ್ರ ನಿವಾಸಿ ಕೆ.ಪಿ ಕುಞಕಣ್ಣನ್(76)ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನೀಲೇಶ್ವರದ ಕರುವಾಚ್ಚೇರಿಯಲ್ಲಿ ಇವರು ಸಂಚರಿಸುತ್ತಿದ್ದ ಕಾರು ಸೆ. 4ರಂದು ರಸ್ತೆವಿಭಾಜಕಕ್ಕೆ ಡಿಕ್ಕಿಯಾಗಿ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕೇರಳ ಪ್ರದೇಶ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇವರ ಹುಟ್ಟೂರು ಕಣ್ಣೂರು ಜಿಲ್ಲೆಯಾಗಿದ್ದರೂ, ಕಾಸರಗೋಡನ್ನು ತಮ್ಮ ಕಾರ್ಯಕ್ಷೇತ್ರವಾಗಿ ಆಯ್ಕೆಮಾಡಿಕೊಂಡಿದ್ದರು.
1987ರಲ್ಲಿ ಸಿಪಿಎಂನ ಕೆ. ಪುರುಷೋತ್ತಮನ್ ಅವರನ್ನು ಭಾರಿ ಮತಗಳ ಅಂತರದಿಂದ ಪರಾಭವಗೊಳಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.