ನವದೆಹಲಿ: 'ಸ್ವಚ್ಛ ಭಾರತ ಅಭಿಯಾನವು ಜನರ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರಿದೆ. ಈ ಅಭಿಯಾನವು ಗೇಮ್ ಚೇಂಜರ್ ಆಗಿ ಕಾರ್ಯನಿರ್ವಹಿಸಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.
ನವದೆಹಲಿ: 'ಸ್ವಚ್ಛ ಭಾರತ ಅಭಿಯಾನವು ಜನರ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರಿದೆ. ಈ ಅಭಿಯಾನವು ಗೇಮ್ ಚೇಂಜರ್ ಆಗಿ ಕಾರ್ಯನಿರ್ವಹಿಸಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಕುರಿತ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ಸ್ವಚ್ಛ ಭಾರತ ಅಭಿಯಾನದಡಿ ಕೈಗೊಂಡಿರುವ ನೈರ್ಮಲ್ಯ ನಿರ್ವಹಣೆಯಿಂದಾಗಿ ದೇಶದ ಜನರ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರಿದೆ ಎಂದು ಹೇಳಿದ್ದಾರೆ.
ಸ್ವಚ್ಛ ಭಾರತ ಅಭಿಯಾನದಡಿ ಕೈಗೊಂಡ ಶೌಚಾಲಯಗಳ ನಿರ್ಮಾಣದಿಂದಾಗಿ ಶಿಶು ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ಸಂಶೋಧನೆಯೊಂದರ ವರದಿ ತಿಳಿಸಿದೆ ಎಂದು ಮೋದಿ ತಿಳಿಸಿದ್ದಾರೆ.
ಬ್ರಿಟಿಷ್ ಸಾಪ್ತಾಹಿಕ ವೈಜ್ಞಾನಿಕ ಜರ್ನಲ್ 'ನೇಚರ್'ನಲ್ಲಿ ಪ್ರಕಟವಾದ 'ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಶೌಚಾಲಯ ನಿರ್ಮಾಣ ಮತ್ತು ಭಾರತದಲ್ಲಿ ಶಿಶು ಮರಣ' ಕುರಿತ ಸಂಶೋಧನಾ ಪ್ರಬಂಧದ ವರದಿಯ ಬಗ್ಗೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಸ್ವಚ್ಛ ಭಾರತ್ ಮಿಷನ್ ಅನ್ನು 2014ರ ಅಕ್ಟೋಬರ್ 2ರಂದು ಬಯಲು ಮುಕ್ತ ಶೌಚಾಲಯ ಹಾಗೂ ಘನ ತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಯಿತು.
ಅಂದಾಜಿನ ಪ್ರಕಾರ ಸ್ವಚ್ಛ ಭಾರತ ಅಭಿಯಾನದಿಂದಾಗಿ ಸುಮಾರು 60,000 ರಿಂದ 70,000 ಶಿಶು ಮರಣ ತಡೆಗಟ್ಟಲು ಸಾಧ್ಯವಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.