ಕೋಲ್ಕತ್ತ: ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ ಎಂಜಿನ್ ವಿಫಲಗೊಂಡಿದ್ದರಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 10.36ಕ್ಕೆ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ(6ಇ0573) ಎಡಭಾಗದ ಎಂಜಿನ್ ವಿಫಲಗೊಂಡಿದ್ದರಿಂದ, ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 10.53ಕ್ಕೆ ತುರ್ತು ಭೂಸ್ಪರ್ಶ ಮಾಡಲಾಯಿತು.