ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಟೆಲಿಕಾಂ ಸಂಸ್ಥೆಯು ಕೆಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಇನ್ನು ಬಿಎಸ್‌ಎನ್‌ಎಲ್ ಅಧಿಕ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಒಳಗೊಂಡ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆ ಸಹ ಒಳಗೊಂಡಿದೆ.
ಹೌದು, ಬಿಎಸ್‌ಎನ್‌ಎಲ್ (BSNL) ಕಂಪನಿಯು ಹಲವು ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್ ಹೊಂದಿದೆ. ಆ ಪೈಕಿ ನೋಡುವುದಾದರೇ, ಬಿಎಸ್‌ಎನ್‌ಎಲ್‌ನ 2399ರೂ. 2999ರೂ ಮತ್ತು 1999ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್‌ಗಳು ದೀರ್ಘಾವಧಿಗೆ ಅತ್ಯುತ್ತಮವಾಗಿ ಗುರುತಿಸಿಕೊಂಡಿವೆ. ಈ ರೀಚಾರ್ಜ್ ಪ್ಲ್ಯಾನ್‌ಗಳು ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಅಧಿಕ ಡೇಟಾ ಪ್ರಯೋಜನ ಸಹ ಪಡೆದಿವೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಬಿಎಸ್‌ಎನ್‌ಎಲ್ 2399ರೂ. ರೀಚಾರ್ಜ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.
ಇನ್ನುಳಿದಂತೆ ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ 30 ದಿನಗಳವರೆಗೆ ಉಚಿತ EROS Now ಸೌಲಭ್ಯ ಸಹ ದೊರೆಯುತ್ತದೆ. ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ.
ಬಿಎಸ್‌ಎನ್‌ಎಲ್ 2999ರೂ. ರೀಚಾರ್ಜ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 2999ರೂ. ರೀಚಾರ್ಜ್ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್ ಆಗಿದ್ದರೂ, ಇದು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.
ಬಿಎಸ್‌ಎನ್‌ಎಲ್ 1999ರೂ. ರೀಚಾರ್ಜ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 1999ರೂ. ರೀಚಾರ್ಜ್ ಪ್ಲ್ಯಾನ್ ಕೂಡಾ 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 600GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.
ಬಿಎಸ್‌ಎನ್‌ಎಲ್ 499ರೂ. ರೀಚಾರ್ಜ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 75 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ಅವಧಿಗೆ 75 GB ಡೇಟಾ ಲಭ್ಯ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ.
ಬಿಎಸ್‌ಎನ್‌ಎಲ್ 599ರೂ. ರೀಚಾರ್ಜ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 599 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಸಹ ಲಭ್ಯವಾಗಲಿದೆ.