HEALTH TIPS

'ಎಮರ್ಜೆನ್ಸಿ' ಚಿತ್ರಕ್ಕೆ ಪ್ರಮಾಣಪತ್ರ ನೀಡಲು CBFCಗೆ ನಿರ್ದೇಶಿಸಲು ಕೋರ್ಟ್ ನಕಾರ

 ವದೆಹಲಿ: ಲೋಕಸಭೆ ಸಂಸದೆ ಹಾಗೂ ಬಾಲಿವುಡ್‌ ನಟಿ ಕಂಗನಾ ರನೌತ್‌ ಅವರು ನಿರ್ದೇಶಿಸಿ, ಮುಖ್ಯ ಭೂಮಿಕೆಯಲ್ಲಿ ನಟಿಸಿರುವ 'ಎಮರ್ಜೆನ್ಸಿ' ಚಿತ್ರಕ್ಕೆ ತಕ್ಷಣವೇ ಪ್ರಮಾಣಪತ್ರ ನೀಡಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಇದರಿಂದಾಗಿ ಸೆಪ್ಟೆಂಬರ್‌ 6ರಂದು ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ.

ಮಧ್ಯಪ್ರದೇಶದ ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿರುವುದರಿಂದ 'ಎಮರ್ಜೆನ್ಸಿ' ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ‌ ಎಂದು ವರದಿಯಾಗಿದೆ.

ಸೆನ್ಸಾರ್ ಪ್ರಮಾಣಪತ್ರ ನೀಡಲು ಸಿಬಿಎಫ್‌ಸಿಗೆ ನಿರ್ದೇಶನ ನೀಡುವಂತೆ ಕೋರಿ 'ಎಮರ್ಜೆನ್ಸಿ' ಚಿತ್ರತಂಡ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಇಂದು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆಪ್ಟೆಂಬರ್ 18ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಿಬಿಎಫ್‌ಸಿಗೆ ಸೂಚಿಸಿದೆ. ಜತೆಗೆ, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.

ಬಾಂಬೆ ಹೈಕೋರ್ಟ್ ಆದೇಶ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, 'ಎಮರ್ಜೆನ್ಸಿ' ಚಿತ್ರಕ್ಕೆ ಪ್ರಮಾಣಪತ್ರವನ್ನು ಕಾನೂನುಬಾಹಿರವಾಗಿ ತಡೆಹಿಡಿದಿದ್ದಕ್ಕಾಗಿ ಹೈಕೋರ್ಟ್ ಸೆನ್ಸಾರ್ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಸೆನ್ಸಾರ್ ಮಂಡಳಿಯು ಕಾನೂನುಬಾಹಿರವಾಗಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ತಡೆಹಿಡಿದಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಎಮರ್ಜೆನ್ಸಿ ಚಿತ್ರವನ್ನು 2023ರ ನವೆಂಬರ್‌ 24ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಕಂಗನಾ ಲೋಕಸಭೆ ಚುನಾವಣೆಯಲ್ಲಿ ಬ್ಯುಸಿಯಾದ ಕಾರಣ ಚಿತ್ರ ಬಿಡುಗಡೆ ದಿನಾಂಕವನ್ನು ಮತ್ತೊಮ್ಮೆ ಮುಂದೂಡಲಾಗಿತ್ತು.

'ಎಮರ್ಜೆನ್ಸಿ' ಚಿತ್ರ ಭಾರತದ ರಾಜಕೀಯ ಇತಿಹಾಸದ ಕಥಾಹಂದರವನ್ನು ಹೊಂದಿದ್ದು, ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ನಟಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries