HEALTH TIPS

ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: SC

Top Post Ad

Click to join Samarasasudhi Official Whatsapp Group

Qries

 ವದೆಹಲಿ: ಯಾವುದೇ ಪ್ರಕರಣದ ಕುರಿತು ಕೆಲವು ಪತ್ರಗಳ ಆಧಾರದಲ್ಲಿ ಅಥವಾ ಸೂಕ್ತ ಕಾರಣಗಳನ್ನು ದಾಖಲಿಸದೆ ಸಿಬಿಐ ತನಿಖೆಗೆ ಆದೇಶಿಸಲು ಹೈಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಯಾವುದೇ ನೇಮಕಾತಿ ಪ್ರಕ್ರಿಯೆಯನ್ನು ಅನುಸರಿಸದೆಯೇ ಗೂರ್ಖಾ ಪ್ರದೇಶದ ಆಡಳಿತದಲ್ಲಿ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ಉಸ್ತುವಾರಿ ಸಚಿವರು ಪತ್ರ ಬರೆದಿದ್ದರೆಂದು ಆರೋಪಿಸಲಾಗಿತ್ತು.

ಈ ಬಗ್ಗೆ ಸಿಬಿಐನ ಎಸ್‌ಐಟಿ ತನಿಖೆ ಕುರಿತು ಕಲ್ಕತ್ತ ಹೈಕೋರ್ಟ್‌ನ ಏ.9 ಹಾಗೂ 19ರ ಆದೇಶಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ರದ್ದುಪಡಿಸಿದೆ.

'ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸುವಾಗ ಸಿಬಿಐಗೆ ತನಿಖೆಯನ್ನು ವಹಿಸುವ ಅಧಿಕಾರವನ್ನು ಹೊಂದಿದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ, ಯಾವುದೇ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ರಾಜ್ಯ ಪೊಲೀಸರ ತನಿಖೆ ನ್ಯಾಯಯುತವಾಗಿಲ್ಲ ಅಥವಾ ಪಕ್ಷಪಾತವಾಗಿದೆ ಎಂದಾಗ ಮಾತ್ರ ಸಿಬಿಐ ತನಿಖೆಗೆ ವಹಿಸಬೇಕೆಂಬ ತರ್ಕಕ್ಕೆ ಬರಬೇಕು' ಎಂದು ನ್ಯಾಯಪೀಠ ಹೇಳಿದೆ.

ಕೇವಲ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಹೈಕೋರ್ಟ್‌ ಸಿಬಿಐಗೆ ತನಿಖೆಗೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿರಂತರವಾಗಿ ಅಭಿಪ್ರಾಯಪಟ್ಟಿದೆ ಎಂದು ನ್ಯಾಯಪೀಠ ತಿಳಿಸಿದೆ.

ಏಪ್ರಿಲ್‌ 29ರಂದು ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳ ಪಾತ್ರದ ಕುರಿತಂತೆ ಸಿಬಿಐ ತನಿಖೆಗೆ ನಿರ್ದೇಶಿಸಿದ್ದ ಕಲ್ಕತ್ತ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries