ಠಾಣೆ: ಮಹಾರಾಷ್ಟ್ರದ ಠಾಣೆ ನಗರದಲ್ಲಿ ಬೀದಿ ನಾಯಿಯನ್ನು ಹೊಡೆದು ಸಾಯಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಆರೋಪಿಯನ್ನು ಗೋಕುಲ್ ಥೋರ್ ಎಂದು ಗುರುತಿಸಲಾಗಿದೆ. ಘೋಡ್‌ಬಂದರ್‌ನ ಮೊಗರ್ಪಾಡಾದಲ್ಲಿ ಈ ಘಟನೆ ನಡೆದಿದೆ.
ಆರೋಪಿಯು ಬೀದಿ ನಾಯಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು, ತೀವ್ರವಾಗಿ ಗಾಯಗೊಳಿಸಿದ್ದಾನೆ. ಚಿಕಿತ್ಸೆ ಕೊಡಿಸಿದಾದರೂ ನಾಯಿ ಬದುಕುಳಿಯಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.