ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಸ್ಥಾಯಿ ಸಮಿತಿಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಸ್ಥಾಯಿ ಸಮಿತಿಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸಮಿತಿ ಸದಸ್ಯರಾಗಿದ್ದ ಬಿಜೆಪಿ ನಾಯಕ ಕಮಲ್‌ಜೀತ್ ಸೆಹ್ರಾವತ್ ಅವರು ದೆಹಲಿ ಪಶ್ಚಿಮ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆದೇಶಿಸಿದ್ದರು.
'ಬಿಜೆಪಿ ಪ್ರಜಾಫ್ರಭುತ್ವವನ್ನು ಕೊಲೆ ಮಾಡುತ್ತಿದೆ, ಈ ಚುನಾವಣೆ ಅಕ್ರಮ ಮತ್ತು ಅಸಂವಿಧಾನಿಕ' ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಚುನಾವಣೆ ಪ್ರಶ್ನಿಸಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.