ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ 'ಸುಭದ್ರಾ' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು.
ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ 'ಸುಭದ್ರಾ' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು.
ಇದೇ ವೇಳೆ ಮೋದಿ ₹2800 ಕೋಟಿಗೂ ಅಧಿಕ ವೆಚ್ಚದ ರೈಲ್ವೆ ಯೋಜನೆಗೆ ಹಾಗೂ ₹1 ಸಾವಿರ ಕೋಟಿಗೂ ಅಧಿಕ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಅಲ್ಲದೆ 14 ರಾಜ್ಯಗಳ 10 ಲಕ್ಷ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದರು, ಈ ಯೊಜನೆ ಇನ್ನೂ ಹೆಚ್ಚಿನ ಕುಟುಂಬಗಳಿಗೆ ಪ್ರಯೋಜನಕಾರಿಯಾಗುವಂತೆ ಸರ್ವೆ ನಡೆಸಲು 'ಆವಾಸ್ + 2024' ಮೊಬೈಲ್ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಿದರು.