HEALTH TIPS

RSS ಮಾರ್ಗದರ್ಶನ ಬೇಡವೆಂದ ನಡ್ಡಾ ನಡೆ ಒಪ್ಪುವಿರೇ?: ಭಾಗವತ್‌ಗೆ ಕೇಜ್ರಿವಾಲ್ ಪತ್ರ

 ವದೆಹಲಿ: ಬಿಜೆಪಿಯ ರಾಜಕೀಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನದ ಕುರಿತ ಐದು ಪ್ರಶ್ನೆಗಳಿಗೆ ಉತ್ತರ ಬಯಸಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಪ್ರತ್ರ ಬರೆದಿದ್ದಾರೆ.

'ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ರಾಜಕೀಯ ಹಾಗೂ ಈ ದೇಶವನ್ನು ತೆಗೆದುಕೊಂಡು ಹೋಗುತ್ತಿರುವ ರೀತಿ ಭವಿಷ್ಯದಲ್ಲಿ ಭಾರತಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳೂ ಇವೆ.

ಇದು ಹೀಗೆಯೇ ಮುಂದುವರಿದರೆ, ಈ ದೇಶ ಮತ್ತು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ' ಎಂದು ತಮ್ಮ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

  • ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿಯ ರಾಜಕೀಯವನ್ನು ನೀವು ಒಪ್ಪುತ್ತೀರಾ?

  • ವಿರೋಧ ಪಕ್ಷದಲ್ಲಿದ್ದರೂ ಸರ್ಕಾರ ಉರುಳಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು, ಕಳಂಕಿತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಕ್ರಮಕ್ಕೆ ನಿಮ್ಮ ಸಹಮತ ಇದೆಯೇ?

  • ಎಲ್‌.ಕೆ. ಅಡ್ವಾಣಿ, ಮುರುಳಿ ಮನೋಹರ ಜೋಶಿ ಅವರನ್ನು ಒಳಗೊಂಡಂತೆ ರಾಜಕೀಯ ನಿವೃತ್ತಿಗೆ ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಕೆಲವೊಂದು ನಿಯಮಗಳು ನರೇಂದ್ರ ಮೋದಿ ಅವರಿಗೂ ಅನ್ವಯವಾಗಲಿದೆಯೇ?

  • ಬಿಜೆಪಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಹಾಗೂ ಅದರ ಸೈದ್ಧಾಂತಿಕ ಮಾರ್ಗದರ್ಶಕರ ಅಗತ್ಯವಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಹೇಳಿಕೆಗೆ ನಿಮ್ಮ ಪ್ರತಿಕ್ರಿಯೆ ಏನು?

ಈ ಪ್ರಶ್ನೆಗಳು ಭಾರತದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇದೆ. ಇವುಗಳ ಮೇಲೆ ಆರ್‌ಎಸ್‌ಎಸ್‌ನ ಸರಸಂಘಚಾಲಕ ಭಾಗವತ್ ಅವರು ಬೆಳಕು ಚೆಲ್ಲಿ, ಉತ್ತರಿಸುವರು ಎಂದು ಭಾವಿಸುತ್ತೇನೆ ಎಂದು ಬರೆದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries