ನವದೆಹಲಿ: ಮಹಿಳೆ ಯಾವುದೇ ಧರ್ಮಕ್ಕೆ ಸೇರಿರಲಿ ಅಥವಾ ಯಾವುದೇ ಸಾಮಾಜಿಕ ಹಿನ್ನೆಲೆ ಹೊಂದಿರಲಿ, 'ಕೌಟುಂಬಿಕ ಹಿಂಸೆಯಿಂದ ಮಹಿಳೆ ಸಂರಕ್ಷಣೆ ಕಾಯ್ದೆ' ಆಕೆಗೆ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನವದೆಹಲಿ: ಮಹಿಳೆ ಯಾವುದೇ ಧರ್ಮಕ್ಕೆ ಸೇರಿರಲಿ ಅಥವಾ ಯಾವುದೇ ಸಾಮಾಜಿಕ ಹಿನ್ನೆಲೆ ಹೊಂದಿರಲಿ, 'ಕೌಟುಂಬಿಕ ಹಿಂಸೆಯಿಂದ ಮಹಿಳೆ ಸಂರಕ್ಷಣೆ ಕಾಯ್ದೆ' ಆಕೆಗೆ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
'ಈ ಕಾಯ್ದೆ ಕೂಡ ನಾಗರಿಕ ಸಂಹಿತೆಯ ಭಾಗವಾಗಿದೆ. ಸಂವಿಧಾನದಡಿ ಮಹಿಳೆಯರಿಗೆ ನೀಡಲಾಗಿರುವ ಹಕ್ಕುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ರಕ್ಷಿಸುವುದಕ್ಕಾಗಿ ದೇಶದ ಪ್ರತಿಯೊಬ್ಬ ಮಹಿಳೆಗೂ ಈ ಕಾಯ್ದೆ ಅನ್ವಯವಾಗುತ್ತದೆ' ಎಂದು ತಿಳಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರಿದ್ದ ನ್ಯಾಯಪೀಠ, ಕೌಟುಂಬಿಕ ಸಂಬಂಧಗಳಲ್ಲಿ ಕಂಡುಬರುವ ಹಿಂಸೆಯಿಂದ ಸಂತ್ರಸ್ತರಾಗುವ ಮಹಿಳೆಯರನ್ನು ರಕ್ಷಿಸುವುದಕ್ಕೂ ಈ ಕಾಯ್ದೆ ಅನ್ವಯವಾಗಲಿದೆ' ಎಂದು ಹೇಳಿದೆ.
ಪರಿಹಾರ ಮತ್ತು ಜೀವನಾಂಶಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.