ತಿರುವನಂತಪುರಂ: ಉದ್ಯೋಗದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಷ್ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷ್ ಕಂಪ್ಲೈಂಟ್ ಪೋರ್ಟಲ್ ಮೂಲಕ 10,307 ಸಂಸ್ಥೆಗಳನ್ನು ನೋಂದಾಯಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿರುವರು.
ಇವುಗಳಲ್ಲಿ 5,440 ಸಂಸ್ಥೆಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸಲಾಗಿದೆ. ಕ್ಷೇತ್ರವಾರು ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಎಲ್ಲ ಸಂಸ್ಥೆಗಳಲ್ಲಿ ಶಾಸನಬದ್ಧ ಸಮಿತಿಗಳನ್ನು ರಚಿಸಲು ತೀವ್ರ ಯಜ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನು ತಡೆಗಟ್ಟಲು ಮತ್ತು ಎಲ್ಲಾ ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಸೃಷ್ಟಿಸಲು ಪೋಷ್ ಕಂಪ್ಲೈಂಟ್ ಪೋರ್ಟಲ್ ಅನ್ನು ಸ್ಥಾಪಿಸಲಾಗಿದೆ. 10 ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ನೇಮಿಸುವ ಎಲ್ಲಾ ಸಂಸ್ಥೆಗಳು ಕಾನೂನಿನ ಪ್ರಕಾರ ಆಂತರಿಕ ಸಮಿತಿಯನ್ನು ಹೊಂದಿರಬೇಕು.