HEALTH TIPS

ಅಫ್ಗಾನಿಸ್ತಾನ | ಕಾಬೂಲ್‌ನಲ್ಲಿ ಸ್ಫೋಟ: ಒಂದು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

 ಕಾಬೂಲ್‌: ಕೇಂದ್ರ ಕಾಬೂಲ್‌ನ ಜನನಿಬಿಡ ಮಾರುಕಟ್ಟೆಯಲ್ಲಿ ಬುಧವಾರ ಗ್ರೆನೇಡ್‌ ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಆಂತರಿಕ ಸಚಿವಾಲಯ ತಿಳಿಸಿದೆ.

ಇದು ಉದ್ದೇಶಿತ ದಾಳಿಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.

ಗಾಯಗೊಂಡವರಲ್ಲಿ 3 ವರ್ಷದ ಬಾಲಕಿ ಹಾಗೂ 4 ವರ್ಷದ ಬಾಲಕನೂ ಇದ್ದಾರೆ. ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದ ಆಡಳಿತವನ್ನು ತಾಲಿಬಾನ್‌ 2021ರಲ್ಲಿ ವಶಕ್ಕೆ ಪಡೆದ ಬಳಿಕ ಅಫ್ಗಾನಿಸ್ತಾನದಲ್ಲಿ ಉಗ್ರಗಾಮಿ ಚಟುವಟಿಕೆಗಳು ಹೆಚ್ಚಾಗಿವೆ. ತಾಲಿಬಾನ್‌ ಹಾಗೂ ಶಿಯಾ ಸಮುದಾಯದವರನ್ನು ಗುರಿಯಾಗಿಸಿ ಆಗಾಗ್ಗೆ ದಾಳಿ ನಡೆಯುತ್ತಿರುತ್ತವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries