ಕಾಸರಗೋಡು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ )ಕೇರಳ ರಾಜ್ಯ ಘಟಕದ ಆಶ್ರಯ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ )ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ 'ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ-2024'ಕಾಸರಗೋಡು ಕನ್ನಡ ಗ್ರಾಮದಲ್ಲಿ ನವೆಂಬರ್ 10ರಂದು ಜರುಗಲಿದೆ. ಕನ್ನಡ ಗ್ರಾಮದಲ್ಲಿ 60 ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಫಲಪುಷ್ಪಗಳ ಸಸಿಗಳನ್ನು ನೆಟ್ಟು ಸಮ್ಮೇಳನವನ್ನು ಉದ್ಘಾಟಿಸಲಾಗುವುದು.
ಜಿಲ್ಲೆಯ ಪ್ರತಿ ಶಾಲಾ,ಕಾಲೇಜಿನ 10 ರಿಂದ 25 ವಿದ್ಯಾರ್ಥಿಗಳು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ವಿದ್ಯಾರ್ಥಿ ಪ್ರತಿನಿಧಿಗಳಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಈ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು. ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕಥೆ,ಕವನ ಸ್ಪರ್ಧೆ ಮತ್ತು ಸಮೂಹ ಗೀತಾ ಗಾಯನ, ಸಮೂಹ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನದ ನೋಂದಾವಣಿ ದಿನಾಂಕವನ್ನು ಅ.30ರ ವರೆಗೆ ವಿಸ್ತರಿಸಲಾಗಿದೆ.
ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯ,ಕರ್ನಾಟಕ, ಮಹಾರಾಷ್ಟ್ರ,ಗೋವಾ, ನವದೆಹಲಿ,ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು,ಅದ್ಯಾಪಕರು ಹೆತ್ತವರು, ಪೆÇೀಷಕರು ಈ ರಾಜ್ಯಗಳ ವಿವಿಧ ಸಂಘ ಸಂಸ್ಥೆಗಳ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಪದಾಧಿಕಾರಿಗಳು ಪಲ್ಗೊಳ್ಳುವರು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು 2025 ನವೆಂಬರ್ 4ರಂದು 60 ವರ್ಷ ಪೂರೈಸಲಿದ್ದು, ಈ ಸಂದರ್ಭ ಶಿವರಾಮ ಕಾಸರಗೋಡು ಸಂಸ್ಥಾಪಕ ಅಧ್ಯಕ್ಷರಾಗಿರುವ ಕಾಸರಗೋಡು ಕನ್ನಡಗ್ರಾಮದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ) 35ನೇ ಸಂಸ್ಥಾಪನಾ ವರ್ಷಾಚರಣೆಯು ಅದೇ ದಿನ ನಡೆಯುವುದು. ಈ ಸಂದರ್ಭ ಕನ್ನಡ ಗ್ರಾಮ ಸಮುಚ್ಚಯ ಸಾಂಸ್ಕೃತಿಕ ಕೇಂದ್ರದ ಕಾರ್ಯ ಯೋಜನೆಗಳ ಶಂಕುಸ್ಥಾಪನೆ ನಡೆಯಲಿದೆ.