ಕಾಸರಗೋಡು: ನವರಾತ್ರಿ ಮಹೋತ್ಸವ ಅಂಗವಾಗಿ ಅ. 11ರಂದು ಕೇರಳಾದ್ಯಂತ ಉನ್ನತ ಶಿಕ್ಷಣ ಇಲಾಖೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಸಾರ್ವಜನಿಕ ಶೀಕ್ಷಣ ಇಲಾಖೆ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ರಜೆ ಘೋಷಣೆಯಾಗಿದ್ದು, ಇದರ ಜತೆಗೆ ಉನ್ನತ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಿರುವುದಾಗಿ ಉನ್ನತ ಶಿಕ್ಷಣ ಖಾತೆ ಸಚಿವೆ ಆರ್. ಬಿಂದು ತಿಳಿಸಿದ್ದಾರೆ.