ನವದೆಹಲಿ: ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.
ನವದೆಹಲಿ: ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.
'ನರೇಂದ್ರ ಮೋದಿ ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ' ಎಂದು ಆರ್‌ಎಸ್‌ಎಸ್ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ತರೂರ್ ಭಾಷಣ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸೆ. 10ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಸಂಬಂಧ ಅಭಿಪ್ರಾಯ ತಿಳಿಸುವಂತೆ ದೆಹಲಿ ಪೊಲೀಸ್ ಹಾಗೂ ದೂರು ದಾಖಲಿಸಿರುವ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರಿಗೆ ಸುಪ್ರೀಂಕೋರ್ಟ್, ನೋಟಿಸ್ ನೀಡಿದೆ.
ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಹಾಗೂ ಎಸ್‌ವಿಎನ್ ಭಟ್ಟಿ ನೇತೃತ್ವದ ನ್ಯಾಯಪೀಠದ ಮುಂದೆ ಅ.14ರಂದು ಈ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಶಶಿ ತರೂರ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ.29ರಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.