HEALTH TIPS

ದಕ್ಷಿಣ ಲೆಬನಾನಿನಲ್ಲಿ ಹಿಜ್ಬುಲ್ಲಾ ಸಂಘಟನೆಯ 15 ಮಂದಿಯ ಹತ್ಯೆ: ಇಸ್ರೇಲ್

       ಬೈರೂತ್: ದಕ್ಷಿಣ ಲೆಬನಾನ್ ಮೇಲೆ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ 15 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

          ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ತಿಳಿಸಿದೆ. ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ...

           ಮತ್ತೊಂದೆಡೆ ಲೆಬನಾನ್ ರಾಜಧಾನಿ ಹಾಗೂ ಅತಿ ದೊಡ್ಡ ನಗರ ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಹಲವು ಕಟ್ಟಡಗಳು ನೆಲಸಮಗೊಂಡಿವೆ.

ಲೆಬನಾನಿನ ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

         ಹಮಾಸ್ ಮತ್ತು ಹಿಜ್ಬುಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿದೆ.

              ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆದರೆ ಇಸ್ರೇಲ್ ದಾಳಿ ನಡೆಸಿದರೆ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries