ಚಲಿಸುವ ರೈಲಿನಿಂದ ಆಯತಪ್ಪಿ ಬಿದ್ದಿದ್ದ 8 ವರ್ಷದ ಬಾಲಕಿಯನ್ನು ಉತ್ತರ ಪ್ರದೇಶದ ಝಾನ್ಸಿ ಜಿಆರ್‌ಪಿ ಪೊಲೀಸರು, ರೈಲ್ವೆ ಸಿಬ್ಬಂದಿ ಹಾಗೂ ಆರ್‌ಪಿಎಫ್ ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ.
ಚಲಿಸುವ ರೈಲಿನಿಂದ ಆಯತಪ್ಪಿ ಬಿದ್ದಿದ್ದ 8 ವರ್ಷದ ಬಾಲಕಿಯನ್ನು ಉತ್ತರ ಪ್ರದೇಶದ ಝಾನ್ಸಿ ಜಿಆರ್‌ಪಿ ಪೊಲೀಸರು, ರೈಲ್ವೆ ಸಿಬ್ಬಂದಿ ಹಾಗೂ ಆರ್‌ಪಿಎಫ್ ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ.
ಝಾನ್ಸಿಯಿಂದ ಲಕ್ನೊಕ್ಕೆ ತನ್ನ ಪೋಷಕರೊಂದಿಗೆ ತೆರಳುತ್ತಿದ್ದ ಬಾಲಕಿ, ಝಾನ್ಸಿ ಬಳಿ ರಾತ್ರಿ ಆಯತಪ್ಪಿ ರೈಲಿನಿಂದ ಕೆಳಗೆ ಬಿದ್ದಿದ್ದಳು.
ತಕ್ಷಣವೇ ಕಾರ್ಯಪೃವೃತ್ತರಾದ ಝಾನ್ಸಿ ಆರ್‌ಪಿಎಫ್ ಪೊಲೀಸರು, ರೈಲ್ವೆ ಸಿಬ್ಬಂದಿ ಹಾಗೂ ಉತ್ತರ ಪ್ರದೇಶದ ಜಿಆರ್‌ಪಿ ಪೊಲೀಸರು 16 ಕಿ.ಮೀ ಕಾಲ್ನಡಿಗೆ ಮೂಲಕ ಟಾರ್ಚ್ ಬಳಸಿ ಹುಡುಕಾಟ ನಡೆಸಿದ್ದರು. ಲಲಿತಪುರ ಬಳಿ ಗಾಯಗೊಂಡು ಬಿದ್ದಿದ್ದ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೂಡಲೇ ಪೊಲೀಸರು ಲಲಿತಪುರಕ್ಕೆ ಬಾಲಕಿಯನ್ನು ಕೊಂಡೊಯ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಬಾಲಕಿ ಪೋಷಕರ ಮಡಿಲು ಸೇರಿದ್ದಾಳೆ.
ಸಂಕಷ್ಟ ತಿಳಿದು ನಾವೆಲ್ಲ ಒಂದು ತಂಡವಾಗಿ ಚುರುಕಾಗಿ ಕೆಲಸ ಮಾಡಿದ್ದರಿಂದ ಇದು ಸಾಧ್ಯವಾಯಿತು ಎಂದು ಉತ್ತರ ಪ್ರದೇಶ ಪೊಲೀಸ್ ಎಕ್ಸ್ ತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ.